ಮೈಸೂರು, (ಮೇ 07): ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು (yediyurappa Abhimanotsava) ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. . ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು…ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬಿಜೆಪಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (BJP MLC H Vishwanath) ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಅವರ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
