ಗರ್ಭಿಣಿ ಪತ್ನಿ ನ್ಯಾಯಕ್ಕಾಗಿ ಹೋರಾಟ
ತುಮಕೂರು, ಮೇ.6: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ.
ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋದಾಗ ಶುರುವಾದ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿತ್ತು. ಪೋಷಕರ ವಿರೋಧದ ನಡುವೆಯೂ ಈ ಜೋಡಿ ಪಾವಗಡದ ದೇವಸ್ಥಾನದಲ್ಲಿ ಮದುವೆಯಾಗಿತ್ತು.
ಮದುವೆಯಾಗಿ ಒಂದೂವರೆ ವರ್ಷ ಸುಖ ಸಂಸಾರ ನಡೆಸಿದ ಬಳಿಕ, ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ಗರ್ಭಿಣಿ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬೊಮ್ಮಾನಾಯಕ್ ಕುಟುಂಬದವರು ಆತನಿಗೆ ಮತ್ತೊಂದು ಮದುವೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದಾಗ ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಇದನ್ನೂ ಓದಿ: ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ!
ಆರು ತಿಂಗಳ ಗರ್ಭಿಣಿಯಾಗಿರುವ ಯುವತಿಯು ತನ್ನ ಹಾಗೂ ಮಗುವಿನ ಭವಿಷ್ಯಕ್ಕಾಗಿ “ನನಗೆ ನನ್ನ ಗಂಡ ಬೇಕು” ಎಂದು ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ. ಸದ್ಯ ಗಂಡ ಬೊಮ್ಮಾನಾಯಕ್, ಆತನ ತಾಯಿ ಕರಿಯಮ್ಮ ಸೇರಿದಂತೆ ನಾಲ್ವರ ವಿರುದ್ಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
