ಬಹುಭಾಷ ನಟ ಪ್ರಕಾಶ್ ರಾಜ್ (Prakash Raj) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. 4 ಬೇರೆ ಬೇರೆ ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವ ಆರೋಪದ ಮೇಲೆ ಅವರ ವಿರುದ್ಧ ವಕೀಲ ದಿಲೀಪ್ ಕುಮಾರ್ ಎಂಬುವವರು ದೂರು ನೀಡಿದ್ದರು. 2019ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ನಂತರ ಪೊಲೀಸ್ ಆಯುಕ್ತರಿಗೆ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಅಲ್ಲಿಯೂ ಕ್ರಮ ತೆಗೆದುಕೊಳ್ಳದ ಕಾರಣದಿಂದ ನ್ಯಾಯಾಲಯದಲ್ಲಿ ದಿಲೀಪ್ ಕುಮಾರ್ ಅವರು ನೇರವಾಗಿ ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 48ನೇ ಎಸಿಜಿಎಂ ಕೋರ್ಟ್ನಿಂದ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ. ‘ಒಬ್ಬ ವ್ಯಕ್ತಿಗೆ ಒಂದೇ ವೋಟರ್ ಕಾರ್ಡ್ ಇರಬೇಕು. ಪ್ರಕಾಶ್ ರಾಜ್ ಅವರು ಏಕಕಾಲಕ್ಕೆ 4 ಕಡೆಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿದ್ದಾರೆ. ಹಾಗಾಗಿ ದೂರು ನೀಡಿದ್ದೆ’ ಎಂದು ದಿಲೀಪ್ ಕುಮಾರ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.