ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಹಾಸನ, ಮಾರ್ಚ್ 18: ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್​ಐಟಿ ತಿಳಿಸಿದೆ.

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ತನಿಖೆ ಆರಂಭವಾಗಿತ್ತು.

ಅಶ್ಲೀಲ ವಿಡಿಯೋಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, 277 ಜನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ತಾಂತ್ರಿಕ ಸಾಕ್ಷ್ಯಗಳು ಹಾಗೂ ಫೋರೆನ್ಸಿಕ್ ಸೈನ್ಸ್ ಲ್ಯಾಬ್ (FSL) ವರದಿ ಆಧರಿಸಿ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದೆ.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತು!

ಈ ಪ್ರಕರಣದಲ್ಲಿ ಎ1 ನವೀನ್, ಎ2 ಪ್ರಜ್ವಲ್ ಅವರ ಕಾರು ಚಾಲಕರಾಗಿದ್ದ ಕಾರ್ತಿಕ್ ಎನ್, ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಸೇರಿದಂತೆ ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪಣೆ ಮಾಡಲಾಗಿದೆ. ಇವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೆಸರುಗಳೂ ಸೇರಿವೆ. ಅದರಲ್ಲೂ ಬಿಜೆಪಿ ನಾಯಕ ಪ್ರೀತಂಗೌಡ, ಸಂಸದ ಶ್ರೇಯಸ್ ಅತ್ಯಾಪ್ತರ ವಿರುದ್ಧದ ಆರೋಪ ಸಾಬೀತುಪಡಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!

ಪೆನ್​ಡ್ರೈವ್ ಹಂಚಿಕೆ ಕೇಸ್​ನಲ್ಲಿ ಪ್ರಜ್ವಲ್ ಕೂಡ ಆರೋಪಿಯಾಗಿದ್ದಾರೆ. ಅಲ್ಲದೆ, ಮಹಿಳೆಯರ ಸಮ್ಮತಿಯಿಲ್ಲದೆ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪಗಳನ್ನು ಎಸ್​ಐಟಿ ದೃಢಪಡಿಸಿದೆ. ಕೆಲ ಆರೋಪಿಗಳು ತಮ್ಮ ಮೊಬೈಲ್‌ಗಳಿಂದ ಇತರರಿಗೆ ವಿಡಿಯೋ ಹಂಚಿರುವುದನ್ನು ತನಿಖಾ ತಂಡ ದೃಢಪಡಿಸಿದೆ.

ಪ್ರಜ್ವಲ್ ರೇವಣ್ಣ ಹೆಸರಿಲ್ಲ!

ಇದೇ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೆಸರೂ ಉಲ್ಲೇಖವಾಗಿದ್ದರೂ, ಈ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರು ಸೇರಿಸಿಲ್ಲ ಎಂಬುದು ತಿಳಿದುಬಂದಿದೆ. ಮುಂದಿನ ತನಿಖೆ ಮತ್ತು ನ್ಯಾಯಾಲಯದ ಕ್ರಮಗಳು ಏನಿರಲಿವೆ ಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *