ಪ್ರತಿದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? – Kannada News | 5 Health Conditions That May Improve With Regular Beetroot Juice Intake

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆಹಾಕುತ್ತಿದ್ದಾರೆ. ಆರೋಗ್ಯಕರ ಆಹಾರ ಆಯ್ಕೆ ಮಾಡುವುದು ಒಂದು ದೊಡ್ಡ ಸವಾಲಾಗಿದ್ದರೂ ಕೂಡ ನಾವು ಸೇವಿಸುವ ಆಹಾರಗಳ ಪೈಕಿ ಯಾವುದು ಆರೋಗ್ಯಕರ, ಅದನ್ನು ಯಾವ ರೀತಿ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ದೊರೆಯುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಇಂತಹ ಒಳ್ಳೆಯ ಆಹಾರಗಳ ಸಾಲಿನಲ್ಲಿ ಬೀಟ್‌ರೂಟ್ ಜ್ಯೂಸ್ ಕೂಡ ಒಂದು. ಇದು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್‌ರೂಟ್ ಜ್ಯೂಸ್ (Beetroot Juice) ದೇಹದ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ. ಹಾಗಾದರೆ ಪ್ರತಿದಿನ ಒಂದು ಗ್ಲಾಸ್ ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ, ಯಾವ ರೋಗಕ್ಕೆ ಇದು ಮದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ

ಬೀಟ್‌ರೂಟ್‌ನಲ್ಲಿ ನೈಸರ್ಗಿಕ ನೈಟ್ರೇಟ್‌ಗಳು ಹೆಚ್ಚಾಗಿವೆ. ಇವು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ಸಡಿಲಗೊಳಿಸುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವೂ ಕಡಿಮೆಯಾಗುತ್ತದೆ.

ಶಕ್ತಿ ಮತ್ತು ತಾಳ್ಮೆಯನ್ನು ಹೆಚ್ಚಿಸುತ್ತದೆ

ವ್ಯಾಯಾಮ ಮಾಡುವವರು ಹಾಗೂ ಕ್ರೀಡಾಪಟುಗಳಿಗೆ ಬೀಟ್‌ರೂಟ್ ಜ್ಯೂಸ್ ಅತ್ಯುತ್ತಮ ಪಾನೀಯವಾಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೇಹದ ಸಹಿಷ್ಣುತೆಯನ್ನು ವೃದ್ಧಿಸುತ್ತದೆ. ಪರಿಣಾಮವಾಗಿ ದಣಿವು ಕಡಿಮೆಯಾಗಿ ದಿನವಿಡೀ ಚುರುಕಾಗಿರಲು ನೆರವಾಗುತ್ತದೆ.

ಯಕೃತ್ತಿನ ಆರೋಗ್ಯಕ್ಕೆ ಉತ್ತಮ

ಬೀಟ್‌ರೂಟ್‌ನಲ್ಲಿ ಇರುವ ಬೆಟಾಲೈನ್ (Betalain) ಎಂಬ ಶಕ್ತಿಶಾಲಿ ಆಂಟಿಆಕ್ಸಿಡೆಂಟ್ ಯಕೃತ್ತಿನಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಲಿವರ್ ಕಾರ್ಯಕ್ಷಮತೆಯನ್ನು ಸುಧಾರಿಸಿ, ಕೊಬ್ಬಿನ ಸಂಗ್ರಹವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: ಪೇರಳೆ ಹಣ್ಣು ತಿಂದ ತಕ್ಷಣ ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ!

ರಕ್ತಹೀನತೆ ಸಮಸ್ಯೆ ಕಡಿಮೆ ಮಾಡಲು ನೆರವಾಗುತ್ತದೆ

ಬೀಟ್‌ರೂಟ್‌ನಲ್ಲಿ ಕಬ್ಬಿಣಾಂಶ, ಫೋಲೇಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿವೆ. ಇವು ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸಿ, ರಕ್ತಹೀನತೆ (ಅನೀಮಿಯಾ) ಸಮಸ್ಯೆಯನ್ನು ಕಡಿಮೆ ಮಾಡಲು ನೆರವಾಗುತ್ತವೆ.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೀಟ್‌ರೂಟ್ ಜ್ಯೂಸ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಸಿ ಚರ್ಮದ ಕೋಶಗಳನ್ನು ರಕ್ಷಿಸುತ್ತವೆ. ರಕ್ತವನ್ನು ಶುದ್ಧೀಕರಿಸುವ ಮೂಲಕ ಮೊಡವೆ, ಕಲೆಗಳನ್ನು ಕಡಿಮೆ ಮಾಡಿ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

ಬೀಟ್‌ರೂಟ್ ಜ್ಯೂಸ್‌ಗೆ ನಿಂಬೆರಸ, ಶುಂಠಿ ಅಥವಾ ಸೇಬು ತುಂಡುಗಳನ್ನು ಸೇರಿಸಿ ಸೇವಿಸಿದರೆ ರುಚಿಯ ಜೊತೆಗೆ ಹೆಚ್ಚುವರಿ ಪೋಷಕಾಂಶಗಳೂ ದೊರೆಯುತ್ತವೆ. ಆದರೆ ಮೂತ್ರಪಿಂಡದ ಕಲ್ಲು ಸಮಸ್ಯೆ ಅಥವಾ ಮಧುಮೇಹ ಇರುವವರು ವೈದ್ಯರ ಸಲಹೆಯ ಮೇರೆಗೆ ಮಾತ್ರ ಇದನ್ನು ಸೇವಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *