
ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ