Headlines

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ – Kannada News | PM Narendra Modi conferred with Speaker of the Knesset Medal by Israel Parliament

ಜೆರುಸಲೆಮ್, ಫೆಬ್ರವರಿ 25: ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ (PM Modi in Israel) ಅವರಿಗೆ ಇಂದು “ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ” ಪ್ರದಾನ ಮಾಡಲಾಗಿದೆ. ಇದು ಇಸ್ರೇಲ್ ಸಂಸತ್​ ನೆಸ್ಸೆಟ್‌ನ ಅತ್ಯುನ್ನತ ಗೌರವವಾಗಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕೆಲವೇ ಜಾಗತಿಕ ನಾಯಕರಲ್ಲಿ ಮೋದಿ ಕೂಡ ಒಬ್ಬರು. 2018ರಲ್ಲಿ ವಿದೇಶಿ ಗಣ್ಯರಿಗೆ ನೀಡಲಾಗುವ ಅತ್ಯುನ್ನತ ಪ್ಯಾಲೆಸ್ಟೀನಿಯನ್ ಪ್ರಶಸ್ತಿಯಾದ ಪ್ಯಾಲೆಸ್ಟೈನ್ ರಾಜ್ಯದ ಗ್ರ್ಯಾಂಡ್ ಕಾಲರ್ ಅನ್ನು ಮೋದಿಗೆ ನೀಡಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *