ಬೆಂಗಳೂರು, ಜೂನ್ 10: ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ನಾಯಕರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ನೆಹರು ಅವರ ದಾಖಲೆ ಮುರಿದ ಹಿನ್ನೆಲೆಯಲ್ಲಿ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ದೇವರ ಮುಂದೆ ಇಟ್ಟು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೋದಿ ಪರ ಜಯಘೋಷಗಳೂ ಈ ವೇಳೆ ಮೊಳಗಿದವು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.