ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ – Kannada News | Explosives found on pm modis route six police personnel suspended for security lapse in bengaluru

ಪ್ರಧಾನಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ

ಬೆಂಗಳೂರು, ಮೇ 24: ಮೇ 10ರಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಆರ್ಟ್​​ ಆಫ್​​ ಲಿವಿಂಗ್​​ಗೆ ತೆರಳುವ ಮಾರ್ಗ ಸಮೀಪವೇ ಸ್ಫೋಟಕ ಪತ್ತೆ ಕೇಸ್ ಸಂಬಂಧ ಪೊಲೀಸ್​​ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಲೆದಂಡವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ ಪೊಲೀಸ್ ಅಧಿಕಾರಿಗಳು ‌ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಿ ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​
  • ಪ್ರಕರಣ ಸಂಬಂಧ ಒಟ್ಟು 6 ಮಂದಿ ಪೊಲೀಸರ ತಲೆದಂಡ
  • ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಅವರಿಂದ ಆದೇಶ

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್​ಐ, ಓರ್ವ ASI, ನಾಲ್ವರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ 10ರಂದು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹಿಗಾಗಿ ಅಲರ್ಟ್​​ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ; ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಮೇ 10ರಂದು ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಸ್ಫೋಟಕಗಳು ಕಂಡುಬಂದಿದ್ದವು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕವೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:56 am, Sun, 24 May 26

Source link

Leave a Reply

Your email address will not be published. Required fields are marked *