ಚೆನ್ನೈ, (ಮೇ 06): ತಮಿಳುನಾಡು (Tamil Nadu) ವಿಧಾನಸಭೆಯಲ್ಲಿ ದಳಪತಿ ವಿಜಯ್ (Vijay) ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದರು. ಇನ್ನೊಂದೆಡೆ ನಾಳೆಯೇ (ಮೇ 07) ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಸಕಲ ಸಿದ್ಧತೆಗಳನ್ನ ಕೈಗೊಂಡಿದ್ದರು. ಇದಕ್ಕೆ ನೆಹರು ಕ್ರೀಡಾಂಗಣದಲ್ಲಿ (Jawaharlal Nehru Stadium) ಭರ್ಜರಿ ಸಿದ್ಧತೆಗಳು ನಡೆದಿವೆ.
ಆದ್ರೆ, ವಿಜಯ್ ನೀಡಿರುವ ನಂಬರ್ (ಬಹುಮತಕ್ಕೆ ಬೇಕಾದ ಸಂಖ್ಯೆ) ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತೃಪ್ತರಾಗಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅನುಮತಿ ಕೊಟ್ಟಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆ ವಿಜಯ್ ಪ್ರಮಾಣ ವಚನ ಕನಸು ನುಚ್ಚು ನೂರಾಗಿದೆ.