Headlines

ಪ್ರವಾಸಿಗರೇ ಎಚ್ಚರ! 2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗು; ಕಠಿಣ ಕ್ರಮಕ್ಕೆ ಆಗ್ರಹ – Kannada News | Over 2,000 Illegal Homestays in Kodagu: Association Demands Action After US Tourist Assault

2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗುImage Credit source: MediaForge AI

ಮಡಿಕೇರಿ, ಏಪ್ರಿಲ್ 27: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು 2000 ಅಕ್ರಮ ಹೋಂಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೋಂಸ್ಟೇ ಮಾಲೀಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕುಟ್ಟದಲ್ಲಿ ನೋಂದಾಯಿತ ಹೋಂಸ್ಟೇಯೊಂದರಲ್ಲಿ ಪ್ರವಾಸಕ್ಕೆಂದು ಬಂದಿದ್ದ ಅಮೆರಿಕನ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (US woman assault) ನಡೆದ ಘಟನೆ ಬಳಿಕ ಈ ಬೇಡಿಕೆ ತೀವ್ರಗೊಂಡಿದೆ.

ಅಕ್ರಮ ಚಟುವಟಿಕೆಗಳಿಗೆ ಪ್ರಚೋದನೆ ಏನು?

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷೆ ಮೊಂತಿ ಗಣೇಶ್, ಪ್ರವಾಸೋದ್ಯಮ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆ ಹಲವು ತಿಂಗಳುಗಳಿಂದ ಖಾಲಿ ಇರುವುದೇ ಅಕ್ರಮ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದೆ. ಸರಿಯಾದ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಪ್ರವಾಸಿ ಉದ್ಯಮಿಗಳಿಗೆ ಮಾರ್ಗದರ್ಶನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಘದ ಸದಸ್ಯ ಕೆ.ಎಂ. ಕರುಂಬಯ್ಯ ಮಾಹಿತಿ ನೀಡಿ, ಜಿಲ್ಲೆಯಲ್ಲಿ 2,470 ಹೋಂಸ್ಟೇಗಳು ಅಧಿಕೃತವಾಗಿ ನೋಂದಾಯಿತವಾಗಿವೆ. ಆದರೆ, ಇನ್ನೂ 2,000ಕ್ಕೂ ಹೆಚ್ಚು ಹೋಂಸ್ಟೇಗಳು ಯಾವುದೇ ಅನುಮತಿ ಇಲ್ಲದೆ ನಡೆಯುತ್ತಿವೆ. ಬಸ್ ನಿಲ್ದಾಣದ ಬಳಿ ಬ್ರೋಕರ್‌ಗಳು ಪ್ರವಾಸಿಗರನ್ನು ದಾರಿ ತಪ್ಪಿಸಿ ಇಂತಹ ಅಕ್ರಮ ತಾಣಗಳಿಗೆ ಕರೆದೊಯ್ಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಈ ಮಧ್ಯೆ, ಕೊಡಗು ಎಸ್‌ಪಿ ಕೆ. ಬಿಂದು ಮಣಿ ಅವರು ಹೋಟೆಲ್ ಮತ್ತು ಹೋಂಸ್ಟೇ ಮಾಲೀಕರ ಸಭೆ ನಡೆಸಿ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಕಾನೂನುಬಾಹಿರ ಚಟುವಟಿಕೆ ನಡೆದರೆ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *