
ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ.
ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ ಮಾಮೂಲಿಯ ಪೆಟ್ರೋಲ್ಗಿಂತ ತುಸು ಹೆಚ್ಚಿನದ್ದಿರುತ್ತದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್, ಎಚ್ಪಿಸಿಎಲ್ ಈ ಬೆಲೆ ಏರಿಕೆ ಮಾಡಿವೆ.