ಬೆಂಗಳೂರು, ಜುಲೈ 21: ಫುಟ್ಪಾತ್, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್ ಕೊಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೂಡ ಮಾಡುತ್ತೇವೆ. ಬೆಂಗಳೂರಿನಲ್ಲಿ 860 ಕಿ.ಮೀ. ರಾಜಕಾಲುವೆ ವ್ಯಾಪ್ತಿ ಇದ್ದು, ಈಗಾಗಲೇ ಅಂದಾಜು 600 ಕಿ.ಮೀ. ವ್ಯಾಪ್ತಿ ಅಭಿವೃದ್ಧಿ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 400 ಕಿ.ಮೀ. ಮತ್ತು ಬಿಜೆಪಿ ಅವರ ಅಧಿಕಾರಾವಧಿಯಲ್ಲಿ 150 ಕಿ.ಮೀ. ಅಭಿವೃದ್ಧಿಯಾಗಿದೆ. ಹೀಗಾಗಿ ಉಳಿದಿರುವ 260 ಕಿ.ಮೀ. ರಾಜಕಾಲುವೆ ಅಭಿವೃದ್ಧಿ ಆಗಬೇಕಿದೆ. ವಿಶ್ವ ಬ್ಯಾಂಕ್ ಸಹಾಯದೊಂದಿಗೆ ಈ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುತ್ತೇವೆ. ಈ ವೇಳೆ ಒತ್ತುವರಿ ತೆರವು ಕೂಡ ಮಾಡಿಯೇ ಮಾಡುತ್ತೇವೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
