ನವದೆಹಲಿ,ಜುಲೈ 28: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ಭಾಷಣದ ವೀಡಿಯೊವನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ, ಮೆಟಾ ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚಿಸಿದೆ ಎಂದು ಮೂಲಗಳು ತಿಳಿಸಿವೆ. ತಾಂತ್ರಿಕ ದೋಷದಿಂದಾಗಿ ವೀಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ತಕ್ಷಣವೇ ದೋಷವನ್ನು ಸರಿಪಡಿಸಿ ವೀಡಿಯೊವನ್ನು ಮತ್ತೆ ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.
ವಿದೇಶಿ ಸಾಮಾಜಿಕ ಜಾಲತಾಣ ವೇದಿಕೆಯೊಂದು ಭಾರತದ ಪ್ರಧಾನಿಯವರ ಪೋಸ್ಟ್ ನಿರ್ಬಂಧಿಸಿರುವುದನ್ನು ಕೇಂದ್ರ ಸರ್ಕಾರ ತೀವ್ರವಾಗಿ ಪರಿಗಣಿಸಿದೆ. ಮೆಟಾ ನೀಡಿರುವ ವಿವರಣೆಯನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಮೆಟಾ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆಯಿದೆ.
ವೀಡಿಯೊದಲ್ಲೇನಿತ್ತು?: ಜುಲೈ 23 ರಂದು ಅಪ್‌ಲೋಡ್ ಮಾಡಲಾಗಿದ್ದ ಈ ವೀಡಿಯೊದಲ್ಲಿ, ಜಿರಳೆ ಜನತಾ ಪಕ್ಷ ಆಯೋಜಿಸಿದ್ದ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಜೆನ್ ಝಿ ಯುವಜನತೆಗೆ ನೀಡಿದ ಮೊದಲ ಸಂದೇಶವಿತ್ತು. ಇದರಲ್ಲಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ತರುವುದಾಗಿ ಅವರು ಘೋಷಿಸಿದ್ದರು. ವೀಡಿಯೊವನ್ನು ತಡೆಹಿಡಿಯುವ ಮೊದಲು ಅದು ಈಗಾಗಲೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿ ಭಾರಿ ಸದ್ದು ಮಾಡಿತ್ತು. ಮೆಟಾ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಕ್ಲಿಪ್ ಮತ್ತೆ ಸಾರ್ವಜನಿಕರಿಗೆ ಲಭ್ಯವಾಗಿದೆ.
ಮತ್ತಷ್ಟು ಓದಿ: ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ
ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ 36 ದಿನಗಳ ಸತತ ಆಂದೋಲನ ಹಾಗೂ ಜುಲೈ 25 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ಪ್ರಧಾನಿ ಮೋದಿ ಅಧಿಕೃತ ಸಂದೇಶದ ವೀಡಿಯೊವನ್ನೇ ನಿರ್ಬಂಧಿಸಿರುವ ಮೆಟಾ ಸಂಸ್ಥೆಯ ನಡೆಯನ್ನು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಶೀಘ್ರದಲ್ಲೇ ಮೆಟಾ ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪೋಸ್ಟ್
Meta releases a statement on blocking PM Modi’s video on Facebook.
“The content was removed in error and has since been restored.” says a Meta Spokesperson. pic.twitter.com/SZ082SY5kw
— ANI (@ANI) July 28, 2026
ಭಾರತೀಯ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಲಾಗಿರುವ ‘ಸೇಫ್ ಹಾರ್ಬರ್’ ಸೌಲಭ್ಯವನ್ನು ಮೆಟಾ ಇಂತಹ ತಾಂತ್ರಿಕ ಎಡವಟ್ಟುಗಳಿಂದ ದುರುಪಯೋಗಪಡಿಸಿಕೊಳ್ಳುತ್ತಿದೆಯೇ ಎಂಬ ಕುರಿತು ಡಿಜಿಟಲ್ ನೀತಿ ತಜ್ಞರ ನಡುವೆ ಸಾರ್ವಜನಿಕ ಚರ್ಚೆ ಶುರುವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
