ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಅಲ್ಲದೇ ರಿಯಾಯಿತಿ ನೀಡಿದರೆ ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡಲಿದ್ದು,ಇದರಿಂದ ಬೆಂಗಳೂರು ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ಗಾಗಿ ಮನವಿ ಮಾಡುತ್ತಿರುವ ವಿದ್ಯಾರ್ಥಿಗಳು ನಮಗೆ ಉಚಿತ ಪಾಸ್ ಬೇಡ.ಕನಿಷ್ಠ ರಿಯಾಯತಿ ದರದಲ್ಲಿ ಪಾಸ್ ವ್ಯವಸ್ಥೆ ಕಲ್ಪಿಸಿ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಹಾಗಾಗಿ, ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡುವುದರಿಂದ ಪೊಲ್ಯೂಷನ್ ನಿಂದ ಮುಕ್ತರಾಗಬಹುದು. ಖಾಸಗಿ ವಾಹನಗಳನ್ನ ಬಳಸುವುದರಿಂದ ದೂರವಿಡಬಹುದು. ಬೈಕ್ ಗಳಲ್ಲಿ ಬರುವುದರಿಂದ ಅಪಘಾತಗಳು ಸಂಭವಿಸುತ್ತೆ. ಮೆಟ್ರೋ ಪಾಸ್ ವಿತರಿಸಿದ್ರೆ ಖಾಸಗಿ ವಾಹನದಿಂದ ದೂರ ಆಗಬಹುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್ ನೀಡಬೇಕೆಂದು ಎಂದಿದ್ದಾರೆ.
ಇದನ್ನೂ ಓದಿ: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ
ಡಿಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನ ಸಚಿವ ಸಂಪುಟ ಸಭೆ ಮಾಡಿ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ನೀಡೋದಾಗಿ ಘೋಷಣೆ ಮಾಡಿದ್ದರು. ಸದ್ಯ ಪಾಸ್ ವಿತರಣೆಯ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಬೆಂಗಳೂರಿನ ವಿದ್ಯಾರ್ಥಿಗಳು ಸಹ ಮೆಟ್ರೋ ಪಾಸ್ ರಿಯಾಯಿತಿ ನೀಡಬೇಕೆಂದು ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ತೀರ್ಮಾನಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
