ಕೋಲ್ಕತ್ತಾ, ಜುಲೈ 18: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಶನಿವಾರ ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಭಾವಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸೇರಿದ ಕಚೇರಿಯನ್ನು ಆಡಳಿತ ಮಂಡಳಿಯು ಬುಲ್ಡೋಜರ್‌ಗಳ ಮೂಲಕ ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿ ಈ ಭಾರಿ ಕಾರ್ಯಾಚರಣೆ ನಡೆದಿದ್ದು, ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿ ಈ ಬೃಹತ್ ಐದು ಅಂತಸ್ತಿನ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗಿತ್ತು ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕಟ್ಟಡ ಕೆಡಗುವ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ಭಾರಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸುವ ಆತಂಕವಿದ್ದಿದ್ದರಿಂದ ಆಡಳಿತ ವ್ಯವಸ್ಥೆಯು ಅಮ್ತಾಲಾದಾದ್ಯಂತ ಭದ್ರತೆಯನ್ನು ಒದಗಿಸಿತ್ತು. ಪಶ್ಚಿಮ ಬಂಗಾಳ ಪೊಲೀಸರ ಜೊತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) ನೂರಾರು ಯೋಧರನ್ನು ಸ್ಥಳದಲ್ಲಿ ಕಾವಲಿಗಿಡಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ದಳ ಮತ್ತು ತುರ್ತು ವೈದ್ಯಕೀಯ ಸೇವೆಗಳ ವಾಹನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.
ಪೊಲೀಸ್ ಅಧಿಕಾರಿಗಳ ಪ್ರಕಾರ, ಸಾರ್ವಜನಿಕರಿಂದ ಬಂದ ಗಂಭೀರ ದೂರುಗಳ ಆಧಾರದ ಮೇಲೆ ಜುಲೈ 15 ರಂದೇ ಕಟ್ಟಡದ ಮಾಲೀಕರಿಗೆ ಕಟ್ಟುನಿಟ್ಟಿನ ನೋಟಿಸ್ ನೀಡಲಾಗಿತ್ತು.ಚಈ ವಿವಾದಿತ ಐದು ಅಂತಸ್ತಿನ ಕಟ್ಟಡವನ್ನು ‘ಲೀಪ್ಸ್ ಅಂಡ್ ಬೌಂಡ್ಸ್’ ಎಂಬ ಕಂಪನಿಯ ಹೆಸರಿನಲ್ಲಿ ಖರೀದಿಸಲಾದ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
