ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ – Kannada News | Suvendu Adhikari Meets Governor RN Ravi Stakes Claim To Form Government In West Bengal

ಕೊಲ್ಕತ್ತಾ, ಮೇ 8: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ಗಂಟೆಗಳ ಬಳಿಕ ಪಶ್ಚಿಮ ಬಂಗಾಳದ ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ಸಂಜೆ ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು. ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ನಾಳೆ (ಶನಿವಾರ) ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *