ಮಮತಾ ಪ್ರಧಾನಿ ಮೋದಿImage Credit source: Awaz The Voice
ಕೋಲ್ಕತ್ತಾ, ಮೇ 1: ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ(West Bengal)ದ ಚುನಾವಣೋತ್ತರ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯು ಹಿಂದೆ ಸರಿದಿದೆ. ತಮಿಳುನಾಡು, ಆಸ್ಸಾಂ, ಪುದುಚೇರಿ ಹಾಗೂ ಕೇರಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಇದೇ ಸಂಸ್ಥೆಯು ತನ್ನ ಸಮೀಕ್ಷಾ ವರದಿಯನ್ನು ನೀಡಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ತೆಗೆದುಕೊಂಡ ತೀರ್ಮಾನವು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ.
ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಪ್ರದೀಪ್ ಗುಪ್ತಾ ಅವರು ತಮ್ಮ ಸಮೀಕ್ಷಾ ವರದಿಯನ್ನು ತಡೆಹಿಡಿಯುವ ನಿರ್ಧಾರ ಮಾಡುವ ಮುನ್ನ ಎರಡು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಇದು ಹಲವು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಚುನಾವಣೆ ನಡೆಯುವ ನಾಲ್ಕು ತಿಂಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ರಾಜಕಿಯೇತರ ಸಮೀಕ್ಷೆಯೊಂದನ್ನು ಮಾಡುವಾಗ ತನ್ನ ಸಿಬ್ಬಂದಿಯನ್ನು ಜೈಲಿಗೆ ಹಾಕಲಾಗಿತ್ತು. ಹೈಕೋರ್ಟ್ನಲ್ಲಿ ಕಾನೂನು ಹೋರಾಟ ಮಾಡಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸಿಕೊಳ್ಳಬೇಕಾಯಿತು ಎಂದು ಪ್ರದೀಪ್ ಗುಪ್ತಾ ತಿಳಿಸಿದ್ದಾರೆ. ಇದಲ್ಲದೇ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ರಾಜಕIೈ ಮನಸ್ಥಿತಿ ಬಗ್ಗೆ ಇನ್ನೊಂದು ಅಂಶ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಸಮೀಕ್ಷೆಗೆ ಜನರನ್ನು ಭೇಟಿಯಾದಾಗ ಶೇ.70ಕ್ಕೂ ಅಧಿಕ ಜನರು ತಮ್ಮ ಅಭಿಪ್ರಾಯವನ್ನು ಹೇಳಲು ಹೆದರುತ್ತಿದ್ದರು ಅಥವಾ ಬಾಯಿ ಬಿಡುತ್ತಿರಲಿಲ್ಲ. ಹೌದು ಅಥವಾ ಇಲ್ಲ ಎನ್ನುವ ಪ್ರಶ್ನೆಗೂ ಉತ್ತರಿಸಲು ನಿರಾಕರಿಸುತ್ತಿದ್ದರು. ಇಂತಹ ಸಂದರ್ಭದಲ್ಲಿ ನಾನು ಹೇಗೆ ವೈಜ್ಞಾನಿಕವಾದ ಸಮೀಕ್ಷೆಯನ್ನು ಸಿದ್ಧಪಡಿಸಲಿ ಎಂದು ಪ್ರದೀಪ್ ಗುಪ್ತಾ ಪ್ರಶ್ನಿಸಿದ್ದಾರೆ. ಇದೇ ಕಾರಣದಿಂದ ಅವರು ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷಾ ವರದಿಯನ್ನು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ಹೀಗಿರುವಾಗ ಚುನಾವಣೋತ್ತರ ಸಮೀಕ್ಷೆ ಹಾಗೂ ಪಶ್ಚಿಮ ಬಂಗಾಳದ ಬಗ್ಗೆ ಎರಡು ರೀತಿಯ ಪ್ರಶ್ನೆಗಳನ್ನು ಜನರು ಸಾಮಾಜಿಕ ಜಾಲತಾಣದಲ್ಲಿ ಎತ್ತುತ್ತಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಎಂದು ಭಾಷಣ ಮಾಡುವ ಮಮತಾ ಬ್ಯಾನರ್ಜಿ ಹಾಗೂ ಅವರ ಸಹೋದ್ಯೋಗಿ ರಾಜಕೀಯ ಪಕ್ಷಗಳು ತಮ್ಮದೇ ರಾಜ್ಯದಲ್ಲಿ ಇಂತಹ ಭಯಭೀತ ವಾತಾವರಣವನ್ನು ಹೊಂದಿದ್ದರೂ ಮೌನವಾಗಿರುವುದೇಕೆ? ಜನರ ವಾಕ್ ಸ್ವಾತಂತ್ರ್ಯಕ್ಕೂ ಬೆಲೆಯಿಲ್ಲದ ರೀತಿ ಆಡಳಿತ ನಡೆಸಲಾಗುತ್ತಿದೆ ಎಂದು ಟೀಕಿಸುತ್ತಿದ್ದಾರೆ.
ಇನ್ನೊಂದೆಡೆ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಗೆ ಶೇ.70ರಷ್ಟು ಜನರು ಅಭಿಪ್ರಾಯ ನೀಡಲು ಹಿಂದೇಟು ಹಾಕಿದ್ದಾರೆ ಎನ್ನುವುದಾದರೆ, ಉಳಿದ ಸಂಸ್ಥೆಗಳು ಹೇಗೆ ಚುನಾವಣೋತ್ತರ ಸಮೀಕ್ಷೆ ನಡೆಸಿದವು ಹಾಗೂ ಅದರ ನಿಖರತೆ ಏನು ಎಂದು ಪ್ರಶ್ನಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ