
ಚಾಮರಾಜನಗರ, ಏಪ್ರಿಲ್ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.