ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರೋದು
ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬಜೆಟ್ ಸಿದ್ಧತೆಗೆ ವಿರೋಧ ಹಾಗೂ ತಮ್ಮ ನಾಯಕತ್ವದ ಮಹತ್ವಾಕಾಂಕ್ಷೆಯನ್ನು ಹೈಕಮಾಂಡ್ಗೆ ಮತ್ತು ಬೆಂಬಲಿಗರಿಗೆ ತಲುಪಿಸುವ ಪ್ರಯತ್ನ ಇದಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.