ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ

ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ

ಬೆಳಗಾವಿ, ಏ.6 : ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಹಾಗೂ ಮದುವೆಯ ಹೆಸರಿನಲ್ಲಿ ಯುವತಿಯನ್ನು ನಂಬಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿದೆ.

ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತನೇ ಈ ವಂಚನೆಯ ಸೂತ್ರಧಾರ ಎನ್ನಲಾಗಿದೆ. ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಅದನ್ನು ಪ್ರೀತಿಗೆ ತಿರುಗಿಸಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಯುವತಿಗೆ ತಿಳಿಯದಂತೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಯುವತಿಯಿಂದ ಭಾರಿ ಪ್ರಮಾಣದ ಹಣ ವಸೂಲಿ ಮಾಡಿದ್ದಾನೆ. ಸಂತ್ರಸ್ತೆಯ ತಾಯಿಯ ಚಿನ್ನ ಹಾಗೂ ತಂದೆಯ ಎಫ್‌ಡಿ (FD) ಹಣವನ್ನೂ ಈತ ಲೂಟಿ ಮಾಡಿದ್ದಾನೆ. ಸುಮಾರು 150 ಗ್ರಾಂ ಚಿನ್ನಾಭರಣ ಹಾಗೂ 19 ಲಕ್ಷ ರೂಪಾಯಿಗಳನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಆರೋಪಿ ಯುವಕನ ತಾಯಿ “3 ಕೋಟಿ ರೂಪಾಯಿ ಕೊಟ್ಟರೆ ಮಾತ್ರ ಮದುವೆ ಮಾಡಿಕೊಳ್ಳುತ್ತೇವೆ” ಎಂದು ಡಿಮ್ಯಾಂಡ್ ಇಟ್ಟಿರುವುದು ಯುವತಿಯನ್ನು ಕಂಗಾಲಾಗುವಂತೆ ಮಾಡಿದೆ.

ಇದನ್ನೂ ಓದಿ: “ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಈ ಪ್ರಕರಣದಲ್ಲಿ ಶಹಾಪುರ ಪೊಲೀಸರ ನಡೆ ಸಂಶಯಾಸ್ಪದವಾಗಿದೆ ಎಂದು ಯುವತಿ ಆರೋಪಿಸಿದ್ದಾರೆ. ಬ್ಯಾಂಕ್‌ನಿಂದ ರಿಕವರಿ ಮಾಡಿದ್ದ ಚಿನ್ನವನ್ನು ಮರಳಿ ಯುವಕನಿಗೇ ಕೊಟ್ಟು ಕಳುಹಿಸಿದ್ದಾರೆ ಹಾಗೂ ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ನ್ಯಾಯಕ್ಕಾಗಿ ಇಂದು ಕಮಿಷನರ್ ಕಚೇರಿಗೆ ಆಗಮಿಸಿದ ಯುವತಿ, ಕಣ್ಣೀರು ಹಾಕುತ್ತಾ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *