
ಬೆಂಗಳೂರು, ಏಪ್ರಿಲ್ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.