
ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ ನೇರವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ಸುಮಾರು ಹತ್ತಾರು ಅಡಿಗಳಷ್ಟು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ದಂಪತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕನ್ಯಾಕುಮಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ