Headlines

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ – Kannada News | Tarique Rahman takes oath as Bangladesh New Prime Minister

ಢಾಕಾ, ಫೆಬ್ರವರಿ 17: ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು.

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು. ಈ ಸಮಾರಂಭವು ರಾಷ್ಟ್ರೀಯ ಸಂಸತ್ತಿನ ಸಂಕೀರ್ಣದ ದಕ್ಷಿಣ ಪ್ಲಾಜಾದಲ್ಲಿ ನಡೆಯಿತು. ಸುಮಾರು 1,200 ಜನ ಅತಿಥಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) 25 ಚುನಾಯಿತ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹೊಸದಾಗಿ ಆಯ್ಕೆಯಾದ 24 ಇತರ ಸಂಸದರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಫೆ.17ರಂದು ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ, ಪ್ರಧಾನಿ ಮೋದಿಗೆ ಆಹ್ವಾನ

ರೆಹಮಾನ್ ಅವರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 297 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗೆದ್ದಿದೆ. 13ನೇ ಸಂಸತ್ ಚುನಾವಣೆಯಲ್ಲಿ ರೆಹಮಾನ್ ಅವರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 297 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗೆದ್ದಿದೆ. ಬಲಪಂಥೀಯ ಪಕ್ಷವಾದ ಜಮಾತ್-ಇ-ಇಸ್ಲಾಮಿ 68 ಸ್ಥಾನಗಳನ್ನು ಗಳಿಸಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಲಾಗಿತ್ತು.

ಇದನ್ನೂ ಓದಿ: ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು?

ಭಾರತದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಕೂಡ ಬಿರ್ಲಾ ಅವರೊಂದಿಗೆ ತೆರಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *