
ಬಾಗಲಕೋಟೆ, ಮಾರ್ಚ್ 08: ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.