ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ದಿನ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ನಗರದಲ್ಲಿ ಕಿಚ್ಚು ಹಚ್ಚಿಸಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಹೈಲ್ ಹಾಗೂ ಸಿದ್ಧಿಕ್ ಎಂಬವವರಿಂದ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಹಲ್ಲೆ ಖಂಡಿಸಿ ಹಿಂದೂ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
