ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ ಕೇಳಿಬಂದಿದೆ. ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ 18 NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದಿದ್ದರು. ಬಾಗಲಕೋಟೆ ನವನಗರದ ಸಿಪಿಐ ಕಚೇರಿಯಲ್ಲಿ ಗದ್ದಲ ಉಂಟಾಗಿತ್ತು. ಠಾಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಜಮಾವಣೆಗೊಂಡು ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ಎತ್ತಂಗಡಿ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ PSI ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದ್ದು, ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಡಿಸಿ ಭೇಟಿ ಮಾಡಿದ ಬಿಜೆಪಿ ನಾಯಕರು

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಸಿ ಕಚೇರಿಗೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರು ಡಿಸಿ ಭೇಟಿ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕೈಗೊಳ್ಳಿ ಹಾಗೂ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವಂತೆ ಮನವಿ ಪತ್ರ ನೀಡಲಾಗಿದೆ. ವಿಪಕ್ಷ ನಾಯಕ ಅಶೋಕ್​​, ಸಂಸದ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣಸ ಭಾಂಡಗೆ, MLC ಪೂಜಾರ
ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಅರುಣ ಶಹಾಪುರ ಭಾಗಿ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *