ಬಾಗಲಕೋಟೆ, (ಮೇ 04): ಹೆಚ್ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್ನ ಹೆಚ್ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್ ವೈ ಮೇಟಿ ಪುತ್ರಿ ಬಾಯಕ್ಕೆ ಪ್ರತಿಕ್ರಿಯಿಸಿದ್ದು, ತಮ್ಮನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.