ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್ – Kannada News | Sydney Sixers Reach BBL Final: Smith Shines After Babar Azam’s Controversial Exit

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಹಾಗೂ ವಿವಾದಗಳಿಂದ ಸಾಕಷ್ಟು ಸದ್ದು ಮಾಡಿದ್ದ ಸಿಡ್ನಿ ಸಿಕ್ಸರ್ಸ್​ ತಂಡ ಇದೀಗ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಬಾಬರ್ ಆಝಂ ತಂಡದಿಂದ ಹೊರಬಿದ್ದ ಬಳಿಕ ನಡೆದ ಪ್ಲೇಆಫ್‌ ಸುತ್ತಿನ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡವನ್ನು ಎದುರಿಸಿದ್ದ ಸಿಡ್ನಿ ಸಿಕ್ಸರ್ಸ್ 57 ರನ್‌ಗಳಿಂದ ಪಂದ್ಯವನ್ನು ಗೆದ್ದು ಫೈನಲ್​ಗೆ ಟಿಕೆಟ್ ಪಡೆಯಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಡ್ನಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಎಲ್ಲಾ ಬ್ಯಾಟ್ಸ್‌ಮನ್​ಗಳು ಉತ್ತಮ ಆರಂಭವನ್ನೇ ಪಡೆದರು. ಆದರೆ ದೊಡ್ಡ ಇನ್ನಿಂಗ್ಸ್‌ ಆಡುವಲ್ಲಿ ವಿಫಲರಾದರು. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಸ್ಟೀವ್ ಸ್ಮಿತ್ 43 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 65 ರನ್ ಗಳಿಸಿದರು.

ಈ ಗುರಿ ಬೆನ್ನಟ್ಟಿದ ಹೋಬಾರ್ಟ್, ಸಿಡ್ನಿ ಸಿಕ್ಸರ್ಸ್ ಬೌಲರ್‌ಗಳ ದಾಳಿಗೆ ತತ್ತರಿಸಿತು. ಬೆನ್ ಡ್ವಾರ್ಷಿಯಸ್ 26 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರೆ, ಮಿಚೆಲ್ ಸ್ಟಾರ್ಕ್ ಕೂಡ 4 ಓವರ್‌ಗಳಲ್ಲಿ ಕೇವಲ 29 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಶಾನ್ ಅಬಾಟ್ ಮತ್ತು ಜೋಯಲ್ ಡೇವಿಡ್ ತಲಾ 2 ವಿಕೆಟ್ ಪಡೆದರು. ಜ್ಯಾಕ್ ಎಡ್ವರ್ಡ್ಸ್ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಹೋಬಾರ್ಟ್ 141 ರನ್‌ಗಳಿಗೆ ಔಟಾಯಿತು.

Source link

Leave a Reply

Your email address will not be published. Required fields are marked *