ಇಂದೋರ್, ಫೆಬ್ರವರಿ 16: ಇಂದೋರ್‌ನಲ್ಲಿ ಮನೆಯೊಂದರಲ್ಲಿ ಬಟ್ಟೆ ಒಣಗಿಸುವಾಗ 25 ವರ್ಷದ ಮಹಿಳೆಯೊಬ್ಬರು ತಮ್ಮ ರೂಮಿನ ಬಾಲ್ಕನಿಯಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ದೃಶ್ಯ ಆ ಮನೆಯ ಕೆಳಗಿನ ಮಹಡಿಯಲ್ಲಿದ್ದ ಅಂಗಡಿಯಲ್ಲಿ ಅಳವಡಿಸಲಾದ ಸಿಸಿಟಿವಿ (Viral Video) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಬಟ್ಟೆ ಒಣಗಿಸುವಾಗ ಮಹಿಳೆ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಫಾ ಎಂಬ ಮಹಿಳೆ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಬಿದ್ದಿದ್ದಾಗಿ ಆಕೆ ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಮುಖ ಮತ್ತು ಕೈಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ