ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್ ಪೀಠ, ಬೈರತಿ ಬಸವರಾಜ್ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
