ನವದೆಹಲಿ, ಜುಲೈ 31: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ(Shehzad Poonawalla)ಅವರು ತಮ್ಮ ಹುದ್ದೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಧಡೀರ್ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷದ ಉನ್ನತ ನಾಯಕತ್ವಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆಗೆ ನಿಖರ ಕಾರಣಗಳು ಇನ್ನೂ ಹೊರಬಿದ್ದಿಲ್ಲವಾದರೂ, ಪೂನಾವಾಲಾ ಅವರು ಸದ್ಯದಲ್ಲೇ ಮಾಧ್ಯಮಗಳ ಮುಂದೆ ಬಂದು ಅಧಿಕೃತ ಹೇಳಿಕೆ ನೀಡುವ ಸಾಧ್ಯತೆಯಿದೆ.
ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿನ ತಮ್ಮ ಬಯೋದಿಂದ ಪೂನಾವಾಲಾ ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಉಲ್ಲೇಖವನ್ನು ಸಂಪೂರ್ಣವಾಗಿ ತೆಗೆದುಹಾಕಿದ್ದಾರೆ. ಆದರೆ, ತಮ್ಮನ್ನು ಪ್ರಧಾನಿ ನರೇಂದ್ರ ಮೋದಿಯವರ ಜೀವಮಾನದ ಅನುಯಾಯಿ ಎಂದು ಬರೆದುಕೊಂಡಿದ್ದಾರೆ.
ಮತ್ತೊಂದೆಡೆ, ಅವರ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಇಂದಿಗೂ ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂದೇ ಪಟ್ಟಿ ಮಾಡಲಾಗಿದೆ. 2017 ರಲ್ಲಿ ಕಾಂಗ್ರೆಸ್‌ನ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಬಹಿರಂಗವಾಗಿ ಪ್ರಶ್ನಿಸಿ, ರಾಹುಲ್ ಗಾಂಧಿಯವರನ್ನು ಅಧ್ಯಕ್ಷರನ್ನಾಗಿ ಮಾಡಲು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಸುದ್ದಿಯಾಗಿದ್ದರು. ಈ ವಿವಾದದಿಂದಾಗಿ ಅವರು ಕಾಂಗ್ರೆಸ್ ಪಕ್ಷ ಮಾತ್ರವಲ್ಲದೆ ತಮ್ಮ ಸ್ವಂತ ಕುಟುಂಬ ಹಾಗೂ ಸಹೋದರ ತೆಹ್ಸೀನ್ ಪೂನಾವಾಲಾ ಅವರಿಂದಲೂ ಸಾರ್ವಜನಿಕವಾಗಿ ದೂರವಾಗಬೇಕಾಯಿತು. ತದನಂತರ ಬಿಜೆಪಿ ಸೇರಿದ ಪೂನಾವಾಲಾ, ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡು ಟಿವಿ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿದ್ದರು.
ಮತ್ತಷ್ಟು ಓದಿ: ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಬಿಜೆಪಿಗೆ ಬಂದ ನಂತರ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡ ಪೂನಾವಾಲಾ, ಚಾನೆಲ್‌ಗಳ ಚರ್ಚೆಯಲ್ಲಿ ಪ್ರಮುಖವಾಗಿ ಭಾಗವಹಿಸಿ ಪ್ರತಿಪಕ್ಷಗಳ ಹಾಗೂ ರಾಹುಲ್ ಗಾಂಧಿಯವರ ವಿರುದ್ಧ ಪ್ರಬಲ ವಾಗ್ದಾಳಿ ನಡೆಸುವ ಮೂಲಕ ಮನೆಮಾತಾಗಿದ್ದರು.ಇತ್ತೀಚೆಗೆ ಅವರ ಸಹೋದರ ಹಾಗೂ ರಾಜಕೀಯ ವಿಶ್ಲೇಷಕ ತೆಹಸೀನ್ ಪೂನಾವಾಲಾ ಅವರು ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ, ಕೇಂದ್ರದ E20 ಇಂಧನ ನೀತಿ ಹಾಗೂ ಸೋನಮ್ ವಾಂಗ್ಚುಕ್ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದು ಸಹ ಭಾರಿ ಚರ್ಚೆಗೆ ಕಾರಣವಾಗಿತ್ತು.
ಕೆಲವು ಮಾಧ್ಯಮ ವರದಿಗಳ ಪ್ರಕಾರ, ಪೂನಾವಾಲಾ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಬಿಜೆಪಿ ಹೈಕಮಾಂಡ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ, ಈ ಕುರಿತು ಬಿಜೆಪಿಯಾಗಲಿ ಅಥವಾ ಸ್ವತಃ ಶಹಜಾದ್ ಪೂನಾವಾಲಾ ಅವರಾಗಲಿ ಯಾವುದೇ ಅಧಿಕೃತ ಸಾರ್ವಜನಿಕ ಪ್ರಕಟಣೆ ನೀಡಿಲ್ಲ.
ಇತ್ತೀಚೆಗೆ ಅವರ ಸಹೋದರ ಹಾಗೂ ರಾಜಕೀಯ ವಿಶ್ಲೇಷಕ ತೆಹಸೀನ್ ಪೂನಾವಾಲಾ ಅವರು ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ, ಕೇಂದ್ರದ E20ಇಂಧನ ನೀತಿ ಹಾಗೂ ಸೋನಮ್ ವಾಂಗ್ಚುಕ್ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದು ಸಹ ಭಾರಿ ಚರ್ಚೆಗೆ ಕಾರಣವಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 12:00 pm, Fri, 31 July 26
