ಬೆಂಗಳೂರು, ಜುಲೈ 21: ನೀಟ್ ಹಗರಣ ಖಂಡಿಸಿ ಹೋರಾಟದ ವೇಳೆ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ನಡೆಸಿದ್ದಾರೆ. ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳು ಮೊಳಗಿವೆ. ಈ ವೇಳೆ ಪ್ರತಿಭಟನಾಕಾರರನ್ನು ಸುತ್ತುವರೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
