ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಬಿಜೆಪಿ ಜಯಭೇರಿ ಬಾರಿಸಿದ್ದು, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.