Headlines

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ – Kannada News | BJP Ex Leader’s Son Cheating Case: High Court Orders 75K Monthly Payment for Child and Mother

ಬೆಂಗಳೂರು, ಏಪ್ರಿಲ್​​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಮಾಸಿಕ 75 ಸಾವಿರ ರೂ. ಪಾವತಿಸಲು ಆದೇಶ

ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಸಂತ್ರಸ್ತೆ ಹಾಗೂ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ; ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್

ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ವಾದ ಮಂಡಿಸಿದ್ದ ವಕೀಲ ಪಿ.ಪಿ.ಹೆಗ್ಡೆ, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್ ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲೂ ಆರೋಪಿಗಳನ್ನಾಗಿಸಿದ್ದಾರೆಂದು ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಯುವತಿ, ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಆರೋಪಿ ಪರ ವಕೀಲರಿಗೆ ಪ್ರಶ್ನಿಸಿದ್ದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ಇದಕ್ಕೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:00 pm, Fri, 24 April 26

Source link

Leave a Reply

Your email address will not be published. Required fields are marked *