ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆImage Credit source: BJP X Account
ಬೆಂಗಳೂರು, ಆಗಸ್ಟ್ 02: ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆ ನಡೆದಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕಾರಜೋಳ, ಮಾಜಿ ಸಂಸದ ನಳಿನ್ ಕುಮಾರ್ ಸೇರಿ ಹಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ, ಮುಂಬರಲಿರುವ ಚುನಾವಣೆಗಳು ಸೇರಿ ಹಲವು ಪ್ರಮುಖ ವಿಚಾರಗಳನ್ನು ಈ ವೇಳೆ ಚರ್ಚಿಸಲಾಗಿದೆ.
ಸಿ.ಟಿ. ರವಿ ಹೇಳಿದ್ದೇನು?
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಪರಿಷತ್ ಚುನಾವಣೆ, ಹಿರಿಯೂರು ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲಿಸುವ ಸಂಬಂಧ ಸಭೆಯಲ್ಲಿ ಚರ್ಚೆಯಾಗಿದೆ. ತಾಂತ್ರಿಕ ಕಾರಣ ಕೊಟ್ಟು 23 ಲಕ್ಷ ಜನರು ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇದರಿಂದ ಅಸಹಾಯಕ ಅಂಗವಿಕಲರು, ವಿಧವೆಯರು, ವೃದ್ದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಲ್ಕು ತುತ್ತು ಅನ್ನ ತಿನ್ನುತ್ತಿದ್ದವರು ಅಸಹಾಯಕರಾಗಿರುವ ಬಗ್ಗೆ ಹೋರಾಟ ಮಾಡ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ; ಕಾಂಗ್ರೆಸ್ನ ಒಂದು ದಂಡೇ ಬಿಜೆಪಿ ಸೇರಲಿದೆ’: ಮುರುಗೇಶ್ ನಿರಾಣಿ
ಇನ್ನು, ಕರ್ನಾಟಕದಲ್ಲಿ ಭೀಕರ ಬರವಿದ್ರೂ ಸರ್ಕಾರ ಕೈಕಟ್ಟಿಕುಳಿತಿದೆ. ಹೀಗಾಗಿ ಸದನವನ್ನ ರೈತರ ಧ್ವನಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿರೋದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಕೆಪಿಎಸ್ಸಿ ಯುವಕರಿಗೆ ಬಹಳ ದೊಡ್ಡ ಅನ್ಯಾಯ ಆಗುತ್ತಿದ್ದು, ವಿದ್ಯಾರ್ಥಿಗಳು ವರ್ಷಗಟ್ಟಲೆ ಶ್ರಮಪಟ್ಟರೂ ವ್ಯರ್ಥವಾಗ್ತಿದೆ. ಇದೆಲ್ಲವನ್ನೂ ಸದನದಲ್ಲಿ ಚರ್ಚೆ ಮಾಡ್ತೇವೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
