ಬೆಂಗಳೂರು, ಜುಲೈ 05: ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆ ಮಾಡಲಾಯಿತು. ಪಕ್ಷವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ಚರ್ಚೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಬಗ್ಗೆ ಚರ್ಚೆ ಮಾಡಲಾಗಿದೆ. ಹಿರಿಯ ನಾಯಕರು ಈ ವಿಷಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳದಿರುವುದು ಮತ್ತು ಶಾಸಕರಿಗೆ ಮತಚಲಾವಣೆಯ ಕುರಿತು ಕನಿಷ್ಠ ತರಬೇತಿಯನ್ನು ನೀಡದಿರುವುದೇ ಅಡ್ಡಮತದಾನಕ್ಕೆ ಮುಖ್ಯ ಕಾರಣ ಎಂದು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ. ಸೂಕ್ತ ತರಬೇತಿಯನ್ನು ನೀಡಿದ್ದರೆ ಇಂತಹ ಸಮಸ್ಯೆಗಳು ಉದ್ಭವಿಸುತ್ತಿರಲಿಲ್ಲ ಎಂದಿದ್ದಾರೆ. ಈ ವೇಳೆ ಮಾತನಾಡಿರುವ ಆರ್. ಅಶೋಕ್, ಶಾಸಕರ ಮೇಲೆ ಅತಿಯಾದ ವಿಶ್ವಾಸ ಇಟ್ಟಿದ್ದೇ ತಪ್ಪಾಯಿತು. ಶಾಸಕರು ಅಡ್ಡ ಮತ ಹಾಕುತ್ತಾರೆ ಎಂಬ ಸಣ್ಣ ಸುಳಿವು ಕೂಡ ನನಗೆ ಇರಲಿಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
