ರಾಮನಗರ, ಜೂನ್ 28: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದೆ. ರೈತರು ವಿಭಿನ್ನವಾಗಿ ಅಪ್ಪಿಕೋ ಚಳುವಳಿಯ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬನ್ನಿಗಿರಿ ಗ್ರಾಮದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳನ್ನು ಅಪ್ಪಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಭೂಮಿ ಉಳಿಸುವ ಸಂದೇಶ ಸಾರಿದ್ದಾರೆ. ಇನ್ನು ಹೋರಾಟ ರಾಜಕೀಯ ತಿರುವು ಪಡೆದುಕೊಂಡಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಡಿ.ಕೆ. ಶಿವಕುಮಾರ್ಗೆ ಪಂಥಾಹ್ವಾನ ನೀಡಿದ್ದಾರೆ. ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ನಡೆದಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಥಳೀಯ ಹೋರಾಟವನ್ನು ರಾಜ್ಯಮಟ್ಟದ ರೈತ ಚಳುವಳಿಯಾಗಿ ಪರಿವರ್ತಿಸಲು ಕುಮಾರಸ್ವಾಮಿ ರಣತಂತ್ರ ಹೆಣೆಯುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಭೂ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
