Headlines

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ – Kannada News | Nitish Kumar resigns as Bihar chief minister says New Government Will Have My Full Cooperation

ಪಾಟ್ನಾ, ಏಪ್ರಿಲ್ 14: ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ (Nitish Kumar) ಯುಗ ಇಂದು ಅಂತ್ಯಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಇಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆ ನಡೆಸಿದರು. ಈ ವೇಳೆ ಅವರು ತುಂಬಾ ಭಾವುಕರಾದರು. ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಹೊಸ ಮುಖ್ಯಮಂತ್ರಿಯ ಜೊತೆಗೆ, ಇತರ ಇಬ್ಬರು ಉಪಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂತಿಮ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾವುಕರಾದರು. ಅವರು ಹೊಸ ಸರ್ಕಾರಕ್ಕೆ ತಮ್ಮ ಶುಭಾಶಯಗಳನ್ನು ಸಹ ಸಲ್ಲಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೊಸ ಸರ್ಕಾರ ನಾಳೆ ಬುಧವಾರ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ರಾಜೀನಾಮೆ ನೀಡಿರುವುದರಿಂದ ಬಿಜೆಪಿಯ ಅಭ್ಯರ್ಥಿ ಸಿಎಂ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ರಾಜ್ಯಸಭಾ ಸಂಸದರಾಗಿ ನಿತೀಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. 2 ದಶಕಗಳ ಕಾಲ ಬಿಹಾರ ಸಿಎಂ ಆಗಿ ಸೇವೆ ಸಲ್ಲಿಸಿದ ನಂತರ ನಿತೀಶ್ ಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಅವರು ಏಪ್ರಿಲ್ 11ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು ಮಾರ್ಚ್ 30ರಂದು ಬಿಹಾರದ ವಿಧಾನಸಭೆಯ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಿತೀಶ್ ಕುಮಾರ್ ಮಾರ್ಚ್ 16ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ನಿಯಮದ ಪ್ರಕಾರ, ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದ 14 ದಿನಗಳ ಒಳಗೆ ಚುನಾಯಿತ ಸದಸ್ಯರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹೀಗಾಗಿ, ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:03 pm, Tue, 14 April 26

Source link

Leave a Reply

Your email address will not be published. Required fields are marked *