ಚಿತ್ರದುರ್ಗ, ಮೇ 09: ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಕಾರ್ಯನಿರ್ವಹಿಸುತ್ತಿದ್ದು, ಮೈಸೂರ್ ಪಾಕ್, ಮೊಸರನ್ನ, ಟೊಮೆಟೊ ಬಾತ್, ಪಲಾವ್, ಮೆಂತ್ಯ ಪಲಾವ್ ಸೇರಿದಂತೆ ವಿವಿಧ ಖಾದ್ಯಗಳ ವ್ಯವಸ್ಥೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
