ಬೀದರ್, ಜುಲೈ 16: ಬೀದರ್ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಂದ ಐದು ಕಂಟ್ರಿ ಪಿಸ್ತೂಲ್ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್ಗಳು ಮತ್ತು ಅಪರಾಧ ಕೃತ್ಯಗಳಿಗೆ ಬಳಸುತ್ತಿದ್ದ ಒಂದು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ತಂಡವು ಶಾಲೆ ಬಳಿ ಬೈಕ್ನಲ್ಲಿಟ್ಟುಕೊಂಡು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿತ್ತು.
ಇದರೊಂದಿಗೆ, ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲಕ್ಕೆ ಬ್ರೇಕ್ ಬಿದ್ದಂತಾಗಿದೆ. ಈ ಇಬ್ಬರು ಆರೋಪಿಗಳು ಮಹಾರಾಷ್ಟ್ರ ಮೂಲದವರಾಗಿದ್ದು, ಬೀದರ್ನಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ, ಈ ಜಾಲದ ಮೂಲ ಮತ್ತು ಇದರ ಹಿಂದೆ ಇರಬಹುದಾದ ದೊಡ್ಡ ಮಟ್ಟದ ವ್ಯವಹಾರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ