ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೆಂಗಳೂರು, ಮಾರ್ಚ್​ 23: ನಗರದಲ್ಲಿ ಬೀದಿ ನಾಯಿಗಳ (Dogs) ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಓಡಾಡುವುದೂ ಕಷ್ಟವಾಗಿದೆ. ಪುಟ್ಟ ಮಕ್ಕಳು, ವೃದ್ಧರಿಗೇನಾದರೂ ಅಪಾಯವಾದರೆ ಎಂಬ ಭಯದ ವಾತಾವರಣವಿರುವ ನಡುವೆಯೇ ನಗರದ ಅಪಾರ್ಟ್ಮೆಂಟ್​ವೊಂದರ ನಿವಾಸಿಗಳು ದೇವರ ಮೊರೆ ಹೋಗಿದ್ದು ಆಶ್ಚರ್ಯ ಮೂಡಿಸಿದೆ. ಬೀದಿ ನಾಯಿ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪ್ರಾಣಿ ಪ್ರಿಯರಿಂದ ಪೂಜೆ, ಪ್ರಸಾದ ಭೋಜನ!

ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಶಾಂತಿ ದೊರಕಲಿ, ಮಾನವರೊಂದಿಗೆ ಸ್ನೇಹಭಾವ ಬೆಳೆಸಲಿ ಎಂದು ನಿವಾಸಿಗಳು ಈ ಮೂಲಕ ಪ್ರಾರ್ಥಿಸಿದ್ದಾರೆ. ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ನಡೆದ ಈ ಪೂಜೆಯಲ್ಲಿ ನಿವಾಸಿಗಳು, ಮಕ್ಕಳು ಹಾಗೂ ಸಾಕು ನಾಯಿಗಳು ಭಾಗವಹಿಸಿದ್ದರು. ಪೂಜೆ ನಂತರ ವಿಶೇಷ ಪ್ರಸಾದ ಹಾಗೂ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದ ವೇಳೆ ಕೆಲ ನಿವಾಸಿಗಳು ಮಾತನಾಡಿ, ಇತ್ತೀಚೆಗೆ ಬೀದಿ ನಾಯಿಗಳಿಂದ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ ನೀವು ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತೀದ್ದೀರಾ? ಹಾಗಿದ್ದರೆ ಈ ತಳಿಯ ಶ್ವಾನಗಳನ್ನು ಸಾಕಿ

ನಗರದ ಅನೇಕ ಅಪಾರ್ಟ್ಮೆಂಟ್‌ಗಳಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚುತ್ತಿರುವುದು ಗಮನಾರ್ಹ. ಕೆಲವೆಡೆ ಮಕ್ಕಳಿಗೆ ಹಾಗೂ ನಿವಾಸಿಗಳಿಗೆ ಕಚ್ಚುವ ಘಟನೆಗಳೂ ವರದಿಯಾಗಿವೆ. ಇಂತಹ ಸಂದರ್ಭದಲ್ಲಿ ಪೂಜೆ ಮತ್ತು ಪ್ರಾರ್ಥನೆಯ ಮೂಲಕ ಮಾನವ-ನಾಯಿ ನಡುವಿನ ಸ್ನೇಹವನ್ನು ಹೆಚ್ಚಿಸಲು ನಿವಾಸಿಗಳು ಮುಂದಾಗಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ, ಬೀದಿ ನಾಯಿಗಳು ಮತ್ತು ಜನರ ನಡುವೆ ಪರಸ್ಪರ ಪ್ರೀತಿ, ನಂಬಿಕೆ ಬೆಳೆಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮ ಗಮನಸೆಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *