ಕಲಬುರಗಿ, ಮಾರ್ಚ್ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
