ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್‌ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್‌ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಶಾಂತಿನಗರದ ಗಿಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿದ್ದು, ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ. ಈ ನಿರಂತರ ಬೆಲೆ ಏರಿಕೆ ಮತ್ತು ಇಂಧನ ಪೂರೈಕೆ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಜೀವನ ನಡೆಸುವುದು ದುಸ್ತರವಾಗಿದೆ ಎಂದಿದ್ದಾರೆ.
ವರದಿ: ಅರುಣ್ ಕುಮಾರ್ ಮೆಟ್ರೋ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.