
ಬೆಂಗಳೂರು, ಮಾರ್ಚ್ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್ನಿಂದ ಆನಂದ ರಾವ್ ಫ್ಲೈಓವರ್, ಓಲ್ಡ್ JDS ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂಪಾರ್ಕ್ವರೆಗೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ ನೀಡಲಾಗಿದೆ.
ಪರ್ಯಾಯ ಮಾರ್ಗಗಳು
“ಸಂಚಾರ ಸಲಹೆ/Traffic advisory” pic.twitter.com/5AKNCuDxdM
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 11, 2026
ಲುಲು ಮಾಲ್, ಕೆಎಫ್ ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್, ರೇಸ್ ಕೋರ್ಸ್ ರಸ್ತೆ.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ: ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ. ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಫೈ ಓವರ್ ರಸ್ತೆ ಮೂಲಕ ಸಂಚರಿಸುವುದು.
ಚಾಲುಕ್ಯ ಸರ್ಕಲ್ನಿಂದ ಮೈಸೂರು ಬ್ಯಾಂಕ್ ಕಡೆಗೆ: ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ನಿಂದ ತೆರಳುವುದು.
ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ: ಕನಕದಾಸ ಜಂಕ್ಷನ್ ಬಲ ತಿರುವು ಸಾಗರ ಜಂಕ್ಷನ್ ಕಡೆಗೆ.
ಮೌರ್ಯ ಸುಬ್ಬಣ್ಣ ಜಂಕ್ಷನ್ನಿಂದ ಫ್ರೀಡಂ ಪಾರ್ಕ್ ಕಡೆಗೆ: ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ತೆರಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ
“ಸಂಚಾರ ಸಲಹೆ”
ದೇವಸಂದ್ರ ಮಾರುಕಟ್ಟೆ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.
“Traffic advisory”
Due to Vehicle breakdown near Devasandra Market towards Tin Factory is having slow-moving traffic. pic.twitter.com/fnVesOKM6w— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 12, 2026
ದೇವಸಂದ್ರ ಮಾರುಕಟ್ಟೆ ಬಳಿ ವಾಹನವೊಂದು ರಸ್ತೆಯಲ್ಲಿಯೇ ಕೆಟ್ಟು ನಿಂತಿರುವ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದೂ ಬೆಂಗಳೂರು ಸಂಚಾರ ಪೊಲೀಸರು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.