Headlines

ಬೆಂಗಳೂರಿನಲ್ಲಿರುವ ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು? – Kannada News | Security Heightened Near Karnataka BJP Office As Students Protest Against NEET Scam In Bengalur

ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಇತ್ತ ಕರ್ನಾಟಕದ ಹಲವು ಕಡೆಗಳಲ್ಲಿ ಕಾಂಗ್ರೆಸ್​​​ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಕಚೇರಿಯ ಮಾರ್ಗದಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಭದ್ರತೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *