Headlines

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್ – Kannada News | Zee Kannada Dance Karnataka Dance Super Mom Auditions in Bengaluru on August 2

ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಬಂದು ಹೋಗಿವೆ. ಎಲ್ಲಾ ರಿಯಾಲಿಟಿ ಶೋಗಳು ಭಿನ್ನವಾಗಿವೆ. ಬಹುತೇಕ ರಿಯಾಲಿಟಿ ಶೋಗಳಲ್ಲಿ ಯುವ ಜನತೆಗೆ ಅವಕಾಶ ಸಿಗುತ್ತದೆ. ಈಗ ಪ್ರಮುಖ ರಿಯಾಲಿಟಿ ಶೋಗಳಲ್ಲೊಂದಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ತಾಯಂದಿರಿಗಾಗಿ ವಿಶೇಷ ಸರಣಿಯನ್ನು ಆರಂಭಿಸುತ್ತಿದ್ದು, ಇದರ ಮೊದಲ ಹಂತದ ಆಡಿಷನ್ ಆಗಸ್ಟ್ 2ರ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಆಸಕ್ತಿ ಇರುವವರು ಇದರಲ್ಲಿ ಭಾಗವಹಿಸಬಹುದು.

ನೃತ್ಯದಲ್ಲಿ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಈ ಶೋ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಗೃಹಿಣಿಯರು ಹಾಗೂ ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಅರ್ಹ ತಾಯಂದಿರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ನಿತ್ಯ ಮಾಡುವ ಕಾಯಕವನ್ನೇ ಮಾಡುವ ಬದಲು ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಇದು ಒಳ್ಳೆಯ ಅವಕಾಶ. ಬೆಂಗಳೂರು ಸೇರಿದಂತೆ ಉಳಿದ ಆಡಿಷನ್ ವಿವರ ಸೋಶಿಯಲ್ ಮೀಡಿಯಾ ಪೋಸ್ಟ್​ನಲ್ಲಿದೆ.

ಆಡಿಷನ್ ನಡೆಯುವ ಸ್ಥಳ ಮತ್ತು ಸಮಯ:

ಆಗಸ್ಟ್ 2ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಉತ್ತರಹಳ್ಳಿ ಹೋಬಳಿ, ಚಿಕ್ಕಲಸಂದ್ರದ ಹನುಮಗಿರಿ ಲೇಔಟ್‌ನಲ್ಲಿರುವ ಮಧು ಆರ್ಟ್ಸ್ ಸ್ಟುಡಿಯೋದಲ್ಲಿ (ಅಬ್ಬಯ್ಯ ನಾಯ್ಡು ಸ್ಟುಡಿಯೋ) ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್   ಸೂಪರ್ ಮಾಮ್

ಭಾಗವಹಿಸುವವರಿಗೆ ಸೂಚನೆಗಳು:

ಆಡಿಷನ್‌ನಲ್ಲಿ ಪಾಲ್ಗೊಳ್ಳಲು ಬಯಸುವ ಸ್ಪರ್ಧಿಗಳು ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ವಿಳಾಸದ ಪುರಾವೆಯ ಜೆರಾಕ್ಸ್ ಪ್ರತಿಗಳನ್ನು ತರುವುದು ಕಡ್ಡಾಯವಾಗಿದೆ. ಈ ಆಡಿಷನ್ ಸಂಪೂರ್ಣ ಉಚಿತವಾಗಿದ್ದು, ಭಾಗವಹಿಸಲು ಜೀ ಕನ್ನಡ ವಾಹಿನಿಯು ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *