ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು ಕರಾವಳಿಯಲ್ಲೂ ಕೂಡ ಇಂದು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಮತ್ತು ಸುತ್ತಮುತ್ತ ನಗರದಲ್ಲಿ ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ಇರಲಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶ ಮತ್ತು ಆರ್ದ್ರತೆ ಹೆಚ್ಚಿರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ತಾಪಮಾನವು 38°C ದಾಟುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆ ಬೆಂಗಳೂರಿನಲ್ಲಿ ಭಾರೀ ಮಳೆ
ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ
ಕರಾವಳಿಯಲ್ಲೂ ಕೂಡ ಇಂದು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಇದನ್ನೂ ಓದಿ: ನಾಳೆಯಿಂದ ಮಂಗಳೂರಿನ ಜನ ಕೂಲ್ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮೈಸೂರು, ಕೊಡಗು ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಕಾಫಿ ಬೆಳೆಗಾರರಿಗೆ ಇದು ಆಶಾದಾಯಕವಾಗಿದೆ. ಇನ್ನು ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಎಲ್ಲೋ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಮಲೆನಾಡು ಭಾಗದ ಈ ಜಿಲ್ಲೆಗಳಲ್ಲಿ ಹವಾಮಾನ ಆಹ್ಲಾದಕರವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿರಲಿದೆ. ಇಲ್ಲಿ ಗರಿಷ್ಠ ತಾಪಮಾನವು 30°C ಇಂದ 32°C ವರೆಗೆ ದಾಖಲಾಗಬಹುದು. ಕಾಫಿ ಬೆಳೆಗಾರರಿಗೆ ಪೂರಕವಾದ ತಂಪಾದ ಗಾಳಿ ಮತ್ತು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಬಿಸಿಲ ಬೇಗೆ ತೀವ್ರವಾಗಿರಲಿದೆ. ರಾಯಚೂರಿನಲ್ಲಿ ಒಣಹವೆ ಮುಂದುವರಿಯಲಿದ್ದು, ತಾಪಮಾನವು 38°C ಗಿಂತಲೂ ಹೆಚ್ಚಿರಲಿದೆ. ಹುಬ್ಬಳ್ಳಿಯಲ್ಲೂ ತಾಪಮಾನ ಏರಿಕೆಯಾಗಲಿದ್ದು, ಸೆಖೆ ಹೆಚ್ಚಿರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ