ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics) ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಒದಿ: ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ
