
ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲೇನಿದೆ?
ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ತಿಳಿಸಿದ್ದಾರೆ. ಸಿಲಿಂಡರ್ ಪೂರೈಕೆಯಲ್ಲಿ ಶೇ50ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್ಗಳನ್ನು ನಡೆಸುವುದು ಕಷ್ಟವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ Hotel Close: ಎಲ್ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಸಣ್ಣ ಹೋಟೆಲ್ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಿ
ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆಯ ಪರಿಣಾಮ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಈ ಉದ್ಯಮವನ್ನು ನಂಬಿ ಬದುಕುತ್ತಿರುವ ಸಾವಿರಾರು ಮಹಿಳಾ ಕಾರ್ಮಿಕರ ಜೀವನೋಪಾಯಕ್ಕೂ ಹೊಡೆತ ಬಿದ್ದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಹಾಗೂ ಸಣ್ಣ ಹೋಟೆಲ್ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.
ವರದಿ: ಲಕ್ಷ್ಮೀ ನರಸಿಂಹ ಟಿವಿ9 , ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.